February 22, 2026
Sunday, February 22, 2026
spot_img

ಕಿಶ್ತ್ವಾರ್‌ನಲ್ಲಿ ಆಪರೇಷನ್ ಟ್ರಾಶಿ-I: ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಸಹಿತ ಇಬ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಆಪರೇಷನ್ ಟ್ರಾಶಿ-I ಕಾರ್ಯಾಚರಣೆಯಲ್ಲಿ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಗುಂಡಿನ ಚಕಮಕಿಯಲ್ಲಿ ಜೈಶ್ ಇ ಮೊಹಮದ್ ಸಂಘಟನೆ ಓರ್ವ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇಬ್ಬರು ಉಗ್ರರಲ್ಲಿ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಸೈಫುಲ್ಲಾ ಸೇರಿದ್ದಾರೆ ಎಂದು ಶಂಕಿಸಲಾಗಿದೆ.

ಕಿಶ್ತ್ವಾರ್‌ನ ಚಟ್ರೂ ಬೆಲ್ಟ್‌ನ ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಅಡಗಿದ್ದ ಭಯೋತ್ಪಾದಕರು ಭಾರತೀಯ ಸೇನೆಯ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರತಿ ದಾಳಿ ನಡೆಸಿದ ಸೇನಾ ಸಿಬ್ಬಂದಿ ಇಬ್ಬರನ್ನು ಹತ್ಯೆಗೈದಿದೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂ ಅರಣ್ಯ ಪ್ರದೇಶದಲ್ಲಿ ಆಪರೇಷನ್ ಟ್ರಾಶಿ-I ಅಡಿಯಲ್ಲಿ ಕಾರ್ಯಾಚರಣೆ ಆರಂಭಿಸಿ ಅಲ್ಲಿ ಅಡಗಿರುವ ಉಗ್ರರನ್ನು ಪತ್ತೆಹಚ್ಚಿ ನಿರ್ಮೂಲಗೊಳಿಸಲು ಕಾರ್ಯಾಚರಣೆ ಆರಂಭಿಸಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ, ಈ ಹಿಂದೆ ಹಲವಾರು ಕಾರ್ಯಾಚರಣೆಗಳಿಂದ ತಪ್ಪಿಸಿಕೊಂಡಿದ್ದನು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !