February 18, 2026
Wednesday, February 18, 2026
spot_img

ಆಪರೇಷನ್‌ ಟ್ರಾಶಿ-I…ಕಾಶ್ಮೀರದ ಕಿಶ್ತ್ವಾರದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಶನಿವಾರ ಭಾರತೀಯ ಯೋಧರು ಉಗ್ರರ ಅಡುಗುತಾಣವನ್ನು ಪತ್ತೆ ಹಚ್ಚಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರನ್ನು ಸುತ್ತುವರಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

2 ವಾರಗಳಿಂದ ಡೋಗ್ಲಾಮ್ ಪ್ರದೇಶದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿದ ನಂತರ, ಪಾಕಿಸ್ತಾನ ಮೂಲದ ಕಮಾಂಡರ್‌ಗಳಾದ ಸೈಫುಲ್ಲಾ ಮತ್ತು ಆದಿಲ್ ಸೇರಿದಂತೆ ಅನೇಕ ಭಯೋತ್ಪಾದಕರು ಅಡಗಿಕೊಂಡಿರುವುದನ್ನು ಪತ್ತೆಹಚ್ಚಿದ ಭದ್ರತಾ ಪಡೆಗಳು ಎನ್‌ಕೌಂಟರ್ ಪ್ರಾರಂಭಿಸಿದವು.

ಜನವರಿ 18ರಿಂದ ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕುವ ಉದ್ದೇಶದಿಂದ ಆಪರೇಷನ್‌ ಟ್ರಾಶಿ-I ಆರಂಭಿಸಲಾಗಿದೆ. ಭಾರತೀಯ ಸೇನೆ, ಸಿಆರ್‌ಪಿಎಫ್‌ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಟಿಯಾಗಿ ನಡೆಸುತ್ತಿರುವ ಈ ಕಾರ್ಯಾಚರಣೆ ಉಗ್ರರು ಅಡಗುತಾಣವನ್ನು ಪತ್ತೆಹಚ್ಚುವ ಗುರಿಯನ್ನು ಹೊಂದಿದೆ.

“ಆಪರೇಷನ್‌ ಟ್ರಾಶಿ-Iರ ಭಾಗವಾಗಿ ಡೋಲ್ಗಾಮ್‌ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಯೋತ್ಪಾದಕರ ಚಟುವಟಿಕೆಯ ಮಾಹಿತಿಗಳನ್ನು ಒದಗಿಸಲು ಗುಪ್ತಚರ ಇಲಾಖೆಯೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ವೈಟ್ ನೈಟ್ ಕಾರ್ಪ್ಸ್‌ನ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !