ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ, ರಜೌರಿ-ಪೂಂಚ್‌ನಲ್ಲಿ ಇಂಟರ್ನೆಟ್ ಇಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರಿದಿದೆ.

ರಜೌರಿ ಹಾಗೂ ಪೂಂಚ್‌ನಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ. ಸೇನಾ ವಾಹನಗಳ ಮೇಲೆ ದಾಳಿ ನಡೆಸಿ ಐವರು ಸೈನಿಕರನ್ನು ಭಯೋತ್ಪಾದಕರು ಬಲಿಪಡೆದಿದ್ದರು. ಅಡಗಿರುವ ಭಯೋತ್ಪಾದಕರನ್ನು ಮೆಟ್ಟಲು ಸೇನೆ ನಿರ್ಧರಿಸಿದ್ದು, ಶೋಧ ಕಾರ್ಯ ಮುಂದುವರಿದಿದೆ.

ವಿಚಾರಣೆ ವೇಳೆ ಅಧಿಕಾರಿಗಳು ಶಂಕಿತರಿಗೆ ಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಆಗದಂತೆ ಪೂಂಚ್ ಹಾಗೂ ರಜೌರಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!