spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

24 ವಾರದವರೆಗೂ ಗರ್ಭಪಾತಕ್ಕೆ ಅವಕಾಶ: ಮಹತ್ವದ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

24 ವಾರದವರೆಗೂ ಗರ್ಭಿಣಿಯರ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರದಿಂದ ಹೊಸ ನಿಯಮಗಳ ಅಧಿಸೂಚನೆ ಹೊರಡಿಸಲಾಗಿದೆ.
ಮೆಡಿಕಲ್ ಟರ್ಮಿನೇಶನ್ ಅಫ್ ಪ್ರೆಗ್ನನ್ಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಈ ಮೂಲಕ ಗರ್ಭಿಣಿಯರ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟಂಬರ್ 24ರಿಂದಲೇ ಅನ್ವಯವಾಗುವಂತೆ ಹೊಸ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಅತ್ಯಾಚಾರ ಸಂತ್ರಸ್ತರು, ಅಪ್ರಾಪ್ತರಿಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಚ್ಛೇದನ ಮತ್ತು ವಿಧವೆಯರು ಗರ್ಭಪಾತ ಮಾಡಿಸಿಕೊಳ್ಳಬಹುದಾಗಿದೆ. ಮಾನಸಿಕ ಅಸ್ವಸ್ಥ ಮಹಿಳೆಯರಿಗೆ ಗರ್ಭಪಾತಕ್ಕೆ ಅವಕಾಶವಿದೆ. ಹಿಂದೆ 20 ವಾರದವರೆಗೆ ಗರ್ಭಪಾತಕ್ಕೆ ಅವಕಾಶ ನೀಡಲಾಗಿತ್ತು. ಇದನ್ನು 24 ವಾರಗಳಿಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss