ವಿಶೇಷ ಆರ್ಥಿಕ ವಲಯಗಳಲ್ಲಿ ವರ್ಕ್ ಫ್ರಮ್ ಹೋಮ್‌ಗೆ ಅವಕಾಶ: ಗೋಯಲ್ ಗುಡ್ ನ್ಯೂಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಲ್ಲಾ ವಿಶೇಷ ಆರ್ಥಿಕ ವಲಯಗಳಲ್ಲಿ (SEZ) ವರ್ಕ್ ಫ್ರಮ್ ಹೋಮ್ (WFH)ಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದರು.

ವರ್ಕ್ ಫ್ರಮ್ ಹೋಮ್ ಸಂಸ್ಕೃತಿಯು ಸಣ್ಣ ನಗರಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಸೇವೆಗಳ ರಫ್ತನ್ನ ಹೆಚ್ಚಿಸುತ್ತದೆ ಎಂದು ಗೋಯಲ್‌ ಅಭಿಪ್ರಾಯಪಟ್ಟರು.

ವಾಣಿಜ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೋಯಲ್, ‘ನಾವು ಎಲ್ಲಾ SEZ ವಲಯಗಳಲ್ಲಿ ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ನಿರ್ಧರಿಸಿದ್ದೇವೆ, ಏಕೆಂದರೆ ಅದಕ್ಕಾಗಿ ಅನೇಕ ವಲಯಗಳಿಂದ ವಿನಂತಿ ಬಂದಿದೆ. ಇದು ಸಣ್ಣ ನಗರಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಸೇವೆಗಳ ರಫ್ತನ್ನ ಹೆಚ್ಚಿಸುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!