April 10, 2026
Friday, April 10, 2026
spot_img

ವಾರಾಣಸಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ವಿರೋಧ: ಅಂಗಡಿಗೆ ಬೆಂಕಿ ಹಚ್ಚಿ ಮಾಲೀಕನ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ವಾರಾಣಸಿಯ ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಕೆಡವಾಲಾಗಿದ್ದು, ಪುರಸಭೆ ಗುರುತಿಸಿದ ಶಿಥಿಲಗೊಂಡ 21 ಮನೆಗಳನ್ನು ನೆಲಸಮ ಮಾಡಲಾಗಿದೆ.

ಕಾರ್ಯಾಚರಣೆ ನಡೆಯುವ ವೇಳೆ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !