Tuesday, October 3, 2023

Latest Posts

I.N.D.I.A ಸನಾತನ ಧರ್ಮವನ್ನು ನಾಶಮಾಡುವ ಪ್ರಯತ್ನದಲ್ಲಿದೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಪಕ್ಷಗಳ ಮೈತ್ರಿಕೂಟ ಐಎನ್‌ಡಿಐಎ ಸತಾತನ ಧರ್ಮವನ್ನು ನಾಶಮಾಡುವ ಪ್ರಯತ್ನದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕತೆಗೆ ಅಪಾಯ ತಂದೊಡ್ಡುವ ಕೆಲಸವನ್ನು ಪ್ರತಿಪಕ್ಷಗಳ ಒಕ್ಕೂಟ ಮಾಡುತ್ತಿದೆ ಎಂದಿದ್ದಾರೆ.

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಕೊರೋನಾ, ಡೆಂಗ್ಯೂ ಹಾಗೂ ಮಲೇರಿಯಾಗೆ ಹೋಲಿಕೆ ಮಾಡಿ. ರೋಗ ಹರಡುತ್ತಲೇ ಇರುತ್ತದೆ. ಬುಡದಿಂದ ನಿರ್ಮೂಲನೆ ಮಾಡಿದಾಗ ಮಾತ್ರ ಸಮಸ್ಯೆ ಅಂತ್ಯವಾಗುತ್ತದೆ ಎಂದು ಹೇಳಿ ವಿವಾದಕ್ಕೀಡಾಗಿದ್ದರು.

ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿದ್ದು, ಸೂಕ್ತ ವಿವರಣೆ ನೀಡುವಂತೆ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ್ದಾರೆ. ಕೆಲವು ಗುಂಪುಗಳು ಸಮಾಜ ವಿಭಜಿಸುವ ಕೆಲಸ ಮಾಡುತ್ತಿವೆ. ಅವು ಒಟ್ಟಾಗಿ ಐಎನ್‌ಡಿಐಎ ಎನ್ನುವ ಕೂಟ ರಚಿಸಿಕೊಂಡಿವೆ, ಭಾರತದ ಸಂಸ್ಕೃತಿ ಮೇಲೆ ದಾಳಿ ಮಾಡುತ್ತಿವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!