ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆಗೆ ಚಾಲನೆ: ಸೋನಿಯಾ, ನಿತೀಶ್ ಸಹಿತ ಪ್ರಮುಖರ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ 2ನೇ ಸಭೆಗೆ ಚಾಲನೆ ನೀಡಿದೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಂಕೆ ಸ್ಟ್ಯಾಲಿನ್, ಅರವಿಂದ್ ಕೇಜ್ರಿವಾಲ್, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ ಹಾಗೂ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆ ಮುನ್ನ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಆಗಮಿಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪಕ್ಷದ ನಾಯಕ ಬಿಹಾರ ಉಪಮುಖ್ಯಮಂತ್ರಿ ಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದರು.

ತಾಜ್ ವೆಸ್ಟ್ ಎಂಡ್ ಹೊಟೆಲ್ ನಲ್ಲಿ ಈ ಸಭೆ ನಡೆದಿದ್ದು ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಭೆ 4 ಗಂಟೆಗೆ ಮುಕ್ತಾಯವಾಗಲಿದೆ.
ಪ್ರತಿಪಕ್ಷಗಳ ಎರಡನೇ ಸಭೆಯಲ್ಲಿ ಕಾಂಗ್ರೆಸ್ ಗೆ 26 ಪಕ್ಷಗಳ ಬೆಂಬಲ ದೊರೆತಿದೆ. ಮೊದಲ ಸಭೆ ಕಳೆದ ತಿಂಗಳು ಪಾಟ್ನಾದಲ್ಲಿ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!