ಅಭಿವೃದ್ಧಿಗಾಗಿ ಆದಷ್ಟು ಬೇಗ BBMP ಚುನಾವಣೆ ನಡೆಸಲು ಸರ್ಕಾರಕ್ಕೆ ವಿಪಕ್ಷ ನಾಯಕ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆ ಆಗಿದೆ. ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ಎಲ್ಲಾ ಕಡೆ ಕಸದ ರಾಶಿ ಕಂಡುಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!