ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ವಿಪಕ್ಷ ನಾಯಕರ ಸಭೆ ನಡೆಯಲಿದ್ದು, ರಾಷ್ಟ್ರಮಟ್ಟದ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮಾರ್ಗಗಳ ಬದಲಾವಣೆ ಮಾಡಲಾಗಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಭೆ ನಡೆಯುತ್ತಿದೆ, ಇನ್ನು ವಿಧಾನಸಭೆಯಲ್ಲಿ ಅಧಿವೇಶನ ಕೂಡ ನಡೆಯುತ್ತಿದ್ದು, ಪರ್ಯಾಯ ಮಾರ್ಗಗಳನ್ನು ಬಳಸಲು ಹೇಳಲಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಮತ್ತು ರೇಸ್‌ಕೋರ್ಸ್ಈ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ.