July 28, 2026
Tuesday, July 28, 2026
spot_img

ಪ್ರಧಾನಿ ಮೋದಿ ಭಾಷಣದ ವಿರುದ್ಧ ವಿಪಕ್ಷಗಳು ಗರಂ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಸಿಪಿಎಂ ಸಂಸದ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಾಡಿದ್ದ ಭಾಷಣದ ವಿರುದ್ಧ ಸಿಪಿಎಂ ಅಸಮಾಧಾನಗೊಂಡಿದ್ದು, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

ಸಿಪಿಎಂ ರಾಜ್ಯಸಭಾ ಸದಸ್ಯ ಪಿ ಸಂತೋಷ್‌ ಕುಮಾರ್‌ ಅವರು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದು, ಪ್ರಧಾನಿ ಮೋದಿ ಭಾಷಣದ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಸುತ್ತ ಐದು ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಂದರ್ಭ ಪ್ರಧಾನಿ ಮೋದಿ ಅವರು ರಾಜಕೀಯದಿಂದ ಕೂಡಿದ ಭಾಷಣ ಮಾಡಿದ್ದಾರೆ. ಜೊತೆಗೆ ತಮ್ಮ ರಾಜಕೀಯಕ್ಕಾಗಿ ದೂರದರ್ಶನ ಮತ್ತು ಸಂಸದ್ ಟಿವಿಯಂತಹ ಸಾರ್ವಜನಿಕ ವೇದಿಕೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದೂ ದೂರಿದ್ದಾರೆ.

ಸಾಮಾನ್ಯವಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಪಕ್ಷವು ಸರ್ಕಾರಿ ಮಾಧ್ಯಮಗಳನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸುವಂತಿಲ್ಲ. ಆದರೆ ಪ್ರಧಾನಿಯವರು ತಮ್ಮ ರಾಜಕೀಯ ಭಾಷಣಕ್ಕಾಗಿ ಸರ್ಕಾರಿ ಸ್ವಾಮ್ಯದ ದೂರದರ್ಶನ ವಾಹಿನಿಯನ್ನು ಬಳಸಿಕೊಂಡಿದ್ದು, ಚುನಾವಣಾ ಶಿಷ್ಟಾಚಾರದ ಗಂಭೀರ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಚುನಾವಣಾ ಆಯೋಗವು ತ್ವರಿತ ಮತ್ತು ಪ್ರಾಮಾಣಿಕ ಕ್ರಮ ತೆಗೆದುಕೊಳ್ಳಬೇಕು. ಈ ವಿಷಯದ ಬಗ್ಗೆ ತನಿಖೆ ನಡೆಸಬೇಕುಮತ್ತು ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯವನ್ನು ಕಾಪಾಡಲು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !