SIR ಕುರಿತು ಚರ್ಚೆಗೆ ಪ್ರತಿಪಕ್ಷಗಳ ಪಟ್ಟು: ಸಂಸತ್ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಇದ್ದುದರಿಂದ ಸಂಸತ್ತಿನ ಉಭಯ ಸದನಗಳ ಕಲಾಪವನ್ನುಸತತ ನಾಲ್ಕನೇ ದಿನವೂ ಮುಂದೂಡಲಾಯಿತು.

ಎರಡೂ ಸದನಗಳನ್ನು ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಆದರೆ ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಘೋಷಣೆ ಕೂಗುವುದನ್ನು ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ಮೂರು ದಿನಗಳು ಇದೇ ರೀತಿಯ ಪ್ರತಿಭಟನೆಗಳಿಂದಾಗಿ ಯಾವುದೇ ಚರ್ಚೆ ನಡೆಯದೇ ಕಲಾಪ ಮುಂದೂಡಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!