ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತಾ ಜಲಧಾರೆ ಯಾತ್ರೆ ಉತ್ತರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ವರದಿ, ಮೈಸೂರು:

ಜೆಡಿಎಸ್ ಪಕ್ಷ ಮುಳುಗ್ಹೋಯ್ತು, ಪಕ್ಷ ಚೇತರಿಸಿಕೊಳ್ಳಲ್ಲ ಎಂದು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತಾ ಜಲಧಾರೆ ಯಾತ್ರೆ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.
ಜಲಧಾರೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಚರ್ಚೆ ಪ್ರಾರಂಭವಾಗಿದೆ. ಜಲಧಾರೆ ಉತ್ತಮವಾದ ಕಾರ್ಯಕ್ರಮ, ಕುಮಾರಸ್ವಾಮಿ ಅವರನ್ನು ಆಶೀರ್ವದಿಸೋಣ ಎಂದು ಚರ್ಚೆ ನಡೆಯುತ್ತಿದೆ.
ಜಲಧಾರೆಯಿಂದ ನನ್ನ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಬಂದಿದೆ. ಡಬಲ್ ಎನರ್ಜಿಯಿಂದ ಕಾರ್ಯಕರ್ತರು ಹೊರಟಿದ್ದಾರೆ.
ಮುಂದಿನ ದಿನಗಳಲ್ಲಿ ರಾಷ್ಟಿçÃಯ ಪಕ್ಷಗಳನ್ನು ತಿರಸ್ಕರಿಸಿ, ಪ್ರಾದೇಶಿಕ ಪಕ್ಷ, ಕನ್ನಡಿಗರಿಗೆ ರಕ್ಷಣೆ ನೀಡುವ ಸರ್ಕಾರ ತರುವುದಕ್ಕೆ ರಾಜ್ಯದ ಜನ ಮನಸ್ಸು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದಲ್ಲಿನ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನತಾ ಜಲಧಾರೆ ಸಭೆ ಬಳಿಕ ಎಲ್ಲವೂ ಸರಿಯಾಗಲಿದೆ. ಎಲ್ಲ ಪಕ್ಷಗಳಲ್ಲೂ ಸಹ ಸಮಸ್ಯೆಗಳು ಇದೆ. ಈಗ ಕಾಂಗ್ರೆಸ್‌ನಲ್ಲಿ ಹೊತ್ತಿ ಉರಿಯುತ್ತಿಲ್ಲವೇ?. ಅಷ್ಟೊಂದು ದೊಡ್ಡ ಮಟ್ಟದ ಸಮಸ್ಯೆ ನಮ್ಮಲ್ಲಿ ಇಲ್ಲ ಎಂದರು.
ಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ಹೇಳಿದಾಗ ಬಹಳ ಜನ ಕೇವಲವಾಗಿ ಮಾತನಾಡಿದ್ದಾರೆ. ರೈತರ ಸಾಲಮನ್ನಾ ಮಾಡುತ್ತೇನೆ ಎಂದಾಗಲೂ ಮಾತನಾಡಿದ್ದರು. ರೈತರ ಸಾಲಮನ್ನಾ ಮಾಡಿ ಸಾಬೀತು ಮಾಡಿದ್ದೇನೆ. ಈ ಬಾರಿ 123ರ ಗುರಿ ಜೊತೆಗೆ ರಾಜ್ಯದ ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಕನ್ನಡತನ ಇರುವ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇಂತಹ ಸರ್ಕಾರ ಪ್ರತಿಷ್ಠಾಪನೆಯಾಗಲು ನಾಡಿನ ಜನತೆ ಆಶೀರ್ವಾದ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಅಭ್ಯರ್ಥಿಗಳ ಹೆಸರು ಘೋಷಣೆಯಷ್ಟೇ ಬಾಕಿ..!
ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೆ ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರೊಡನೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ. 2023ಕ್ಕೆ ಖಂಡಿತವಾಗಿಯೂ ಜೆಡಿಎಸ್ ಅಧಿಕಾರಕ್ಕೆ ತರೋದಕ್ಕೆ ಸಕಲ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ ಕಣಕ್ಕೆ..!
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈ ಪ್ರತಿಷ್ಠಿತ ಕ್ಷೇತ್ರಕ್ಕೆ ಉತ್ತಮ ಅಭ್ಯರ್ಥಿ ಹಾಕಲಾಗುತ್ತೆ. ಈ ಕ್ಷೇತ್ರದಲ್ಲಿ ಕಾರ್ಯಕರ್ತರ ಸಂಘಟನೆ ಚೆನ್ನಾಗಿದೆ. ಜೆಡಿಎಸ್ ಗಟ್ಟಿಯಾಗಿ ನೆಲೆಯೂರಿದೆ. ಹೀಗಾಗಿ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!