ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷದ ಸಂಸದರು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ. ಜೊತೆಗೆ ಕಾಂಗ್ರೆಸ್ ಸಂಸದರಿಂದ ಪ್ರಧಾನಿ ಬೆದರಿಕೆಯಂತಹ ಘಟನೆ ಬಗ್ಗೆ ಮಾಹಿತಿ ಬಂದಿರುವುದರಿಂದ ಸಂಭಾವ್ಯ ಯಾವುದೇ ಅಹಿತಕರ ಘಟನೆ ತಡೆಯಲು ಪ್ರಧಾನಿ ಸದನಕ್ಕೆ ಬರದಂತೆ ತಾವೇ ಹೇಳಿದ್ದಾಗಿ ಫೆಬ್ರವರಿ 5 ರಂದು ಸ್ಪೀಕರ್ ಹೇಳಿದ್ದರು.
ಇಂದು ಕಲಾಪ ಆರಂಭವಾಗುತ್ತಿದ್ದಂತೆಯೇ ಏಳು ನಿಮಿಷಗಳ ನಂತರ ಕಲಾಪವನ್ನು ಮುಂದೂಡಲಾಯಿತು. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗಿ ಪ್ರತಿಭಟನೆ ಮುಂದುವರೆಸಿದರು. ಶಾಂತಿ ಕಾಪಾಡುವಂತೆ, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಸ್ಪೀಕರ್ ಅವರು ಪದೇ ಪದೇ ಮನವಿ ಮಾಡಿದ್ದರೂ ವಿಪಕ್ಷಗಳ ಸದಸ್ಯರು ಸೊಪ್ಪು ಹಾಕಲಿಲ್ಲ. ಹೀಗಾಗಿ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.



