March 9, 2026
Monday, March 9, 2026
spot_img

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆಗೆ ಒತ್ತಾಯ: ಸಂಸತ್ ಸಂಕೀರ್ಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಸೋಮವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಕೊಲ್ಲಿ ಉರಿಯುತ್ತಿದೆ, ತೈಲ ಆಘಾತ. ಭಾರತೀಯರು ಸಿಲುಕಿಕೊಂಡಿದ್ದಾರೆ. ಭಾರತಕ್ಕೆ ನಾಯಕತ್ವ ಬೇಕು – ಮೌನವಲ್ಲ’ ಎಂದು ಬರೆದ ಬೃಹತ್ ಬ್ಯಾನರ್‌ನೊಂದಿಗೆ ಸಂಸದರು ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !