March 23, 2026
Monday, March 23, 2026
spot_img

ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೊಟೀಸ್ ಸಲ್ಲಿಸಿದ ಪ್ರತಿಪಕ್ಷಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೊಟೀಸ್​ ಅನ್ನು ಕಾಂಗ್ರೆಸ್ ಸಹಿತ ವಿರೋಧ ಪಕ್ಷ ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ.

ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷವು ನಿಯಮ 94ಸಿ ಅಡಿಯಲ್ಲಿ ಅವಿಶ್ವಾಸ ಗೊತ್ತುವಳಿ ನೊಟೀಸ್ ಸಲ್ಲಿಸಿದೆ.

ಸಂಸತ್ತಿನಲ್ಲಿ ನಿರ್ಣಯ ಮಂಡಿಸಲು ಅಗತ್ಯವಿರುವ 100 ಸಹಿಗಳ ಅಗತ್ಯವನ್ನು ಮೀರಿ 106 ಸಂಸದರಿಂದ ಸಹಿಗಳನ್ನು ಪಡೆದುಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಈ ನಿರ್ಣಯಕ್ಕೆ ಸಮಾಜವಾದಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬೆಂಬಲವಿದೆ. ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಔಪಚಾರಿಕವಾಗಿ ತನ್ನ ನಿಲುವನ್ನು ಘೋಷಿಸಿಲ್ಲ. ಟಿಎಂಸಿ ನಾಯಕರು ಸಭೆಯಲ್ಲಿ ಭಾಗವಹಿಸಲಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !