ಹೊಸದಿಗಂತ ವರದಿ ಹುಬ್ಬಳ್ಳಿ:
ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಅಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ವಿರೋಧ ಪಕ್ಷಗಳು ಪ್ರಭಲವಾಗಿಲ್ಲ. ಪ್ರಾದೇಶಿಕ ಪಕ್ಷಗಳ ಸಂಖ್ಯೆ ಹೆಚ್ಚಿದೆ. ಅವು ಸಹ ಆಯಾ ರಾಜ್ಯಗಳಿಗೆ ಸೀಮಿತ ವಾಗಿವೆ ಎಂದರು.
ನಾಳೆ ನಡೆಯುವ ಪ್ರತಿಪಕ್ಷಗಳ ಒಕ್ಕೂಟ ರಚನೆ ಸಭೆಯಿಂದ ವಿರೋಧ ಪಕ್ಷಗಳಿಗೆ ಯಾವುದೇ ಲಾಭ ಆಗುವುದಿಲ್ಲ. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ ಎಂದು ತಿಳಿಸಿದರು.
ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಉತ್ತಮ ಸ್ಥಾನ ಸಿಗುತ್ತಿದೆ ಎಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ನಡೆದಿರುವ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷದ ನಾಯಕನ ಆಯ್ಕೆ ಜು. 18ರ ಬಳಿಕ ಘೋಷಣೆ ಆಗಬಹುದು. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ ಎಂದು ಹೇಳಿದರು.
ಗೃಹ ಲಕ್ಷ್ಮಿ ಈಗಾಗಲೇ ಯಡವಟ್ಟಾಗಿದೆ. ಯೋಜನೆ ಜಾರಿ ದಿನಾಂಕ ಬದಲಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮಗಳನ್ನು ಮಾಡುತ್ತಿಲ್ಲ. ದೊಡ್ಡ ಹೊಡೆತ ಬೀಳುವ ಯೋಜನೆ ಇದಾಗಿರುವ ಹಿನ್ನೆಲೆ ಯೋಜನೆಯನ್ನ ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.