Sunday, December 3, 2023

Latest Posts

ಜಾತಿ ಹೆಸರಿನಲ್ಲಿ ವಿಪಕ್ಷಗಳು ದೇಶ ವಿಭಜಿಸುವ ಪ್ರಯತ್ನ ಮಾಡುತ್ತಿವೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾತಿ ಹೆಸರಿನಲ್ಲಿ ವಿಪಕ್ಷಗಳು ದೇಶವನ್ನು ವಿಭಜಿಸುವ ಪ್ರಯತ್ನವನ್ನು ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕಿಡಿ ಕಾರಿದ್ದಾರೆ.

ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿಯು ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಪ್ರತಿಪಕ್ಷಗಳು ಆಗಿನಿಂದಲೂ ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ ಬಿಹಾರ ಸರ್ಕಾರ ಬಿಡುಗಡೆ ಮಾಡಿರುವ ಜಾತಿಗಣತಿ ವರದಿ. ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಭಾರತವನ್ನು ವಿಶ್ವದ ಬೇರೆ ರಾಷ್ಟ್ರಗಳು ಹೊಗಳುವುದನ್ನು ಸಹಿಸದ ಇವರು ದೇಶದಲ್ಲಿ ಯಾವುದೇ ಅಭಿವೃದ್ದಿಗಳು ಆಗಿಲ್ಲ ಎಂಬುವಂತೆ ತೋರಿಸುವ ಪ್ರಯತ್ನವಾಗುತ್ತಿದೆ ಎಂದು ಪ್ರಧಾನಿ ಮೋದಿ ವಿಪಕ್ಷಗಳ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!