ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ

ಹೊಸದಿಗಂತ ವರದಿ,ಚಿತ್ರದುರ್ಗ

ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಕಾಂಗ್ರೆಸ್‌ಗೆ ಜನ ಇಡೀ ದೇಶದಲ್ಲಿ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ವಿರೋಧ ಪಕ್ಷವಾಗಿ ಕೆಲಸ ಮಾಡುವ ಶಕ್ತಿ ಸಹ ಅವರಿಗಿಲ್ಲ. ಬರುವ ಚುನಾವಣೆಯಲ್ಲಿ ಜನ ಲಂಗೋಟಿ ಬಿಚ್ಚಿ ಕಳಿಸಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪರೋಕ್ಷ ಟಾಂಗ್ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರನ್ನೋ ದುರ್ಬಳಕೆ ಮಾಡಿಕೊಂಡು ಸರ್ಕಾರ ನಡೆಸುವ ಅಗತ್ಯವಿಲ್ಲ. ಮುತಾಲಿಕ್ ಹೇಳಿಕೆಗೆಲ್ಲ ಪ್ರತಿಕ್ರಿಯೆ ನೀಡಲ್ಲ ಎಂದರು.
ಕಾಂಗ್ರೆಸ್, ಜೆಡಿಎಸ್‌ನವರು ಯಾವಾಗ ಜತೆಯಾಗುತ್ತಾರೆ, ಯಾವಾಗ ಬೇರೆ ಆಗುತ್ತಾರೋ ಗೊತ್ತಿಲ್ಲ. ಅವರಿಬ್ಬರ ಜಗಳದ ನಡುವೆ ನಾವಂತೂ ಸೇಫ್ ಆಗಿದ್ದೇವೆ. ಬಿಜೆಪಿ ಭದ್ರವಾಗಿದ್ದು ರಾಜ್ಯಸಭೆ ಸ್ಥಾನ ಗೆಲ್ಲಲಿದೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಭಿವೃದ್ಧಿಗಾಗಿ ಬಿಎಸ್‌ವೈ ಆಡಳಿತದಲ್ಲಿ ಸಾಲ ಆಗಿರಬಹುದು. ಸಿದ್ದರಾಮಯ್ಯ ಕಾಲದಲ್ಲಿ ಸಾಲವೇ ಮಾಡಿಲ್ಲವೇ? ದೇವಲೋಕವನ್ನೇ ಭೂಮಿಗೆ ಇಳಿಸಿದಂತೆ ಸಿದ್ಧರಾಮಯ್ಯ ಮಾತಾಡ್ತಾರೆ. ಸಿದ್ಧರಾಮಯ್ಯ ಆಡಳಿತದಲ್ಲೂ ಗುತ್ತಿಗೆದಾರರಿಗೆ ಬಿಲ್ ಕೊಡದೆ ಸತಾಯಿಸಿದ್ದು ಜನ ಮರೆತಿಲ್ಲ ಎಂದ ಅವರು, ಬಿ.ವೈ.ವಿಜಯೇಂದ್ರ ಮುಂದಿನ ಸಿಎಂ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಬೊಮ್ಮಾಯಿ ಸಮರ್ಥ ಆಡಳಿತ ನೀಡುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಭಯೋತ್ಪಾದಕನ ಬಂಧನ ಆಗಿದೆ. ಜಮ್ಮು – ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಾಥ್ ನೀಡಿದ್ದಾರೆ. ಭಯೋತ್ಪಾದಕಗೆ ಆಶ್ರಯ ನೀಡಿದವರು, ಸಂಪರ್ಕದಲ್ಲಿದ್ದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದ ಅವರು, ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ ತಲೆ ಮೇಲೆ ಚಡ್ಡಿ ಹೊತ್ತ ಬಗ್ಗೆ ಸಿದ್ದರಾಮಯ್ಯ ಟೀಕೆ ಬಗ್ಗೆ ಮಾತನಾಡಿ, ಚಲವಾದಿ ನಾರಾಯಣಸ್ವಾಮಿ ಪ್ರತಿಭಟನೆ ನಡೆಸಿದ್ದಾರೆಂದು ಸಮರ್ಥಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!