ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಟ್ನಾದಲ್ಲಿ ಬಿಜೆಪಿ ವಿರುದ್ಧ ಲೋಕಸಭೆಯಲ್ಲಿ ಗೆಲುವು ಸಾದಿಸಲು ವಿಪಕ್ಷಗಳು ಒಂದಾಗಿದ್ದು, ಬೃಹತ್ ಸಭೆ ನಡೆಸುತ್ತಿದ್ದು, ಇದರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಜಮ್ಮುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ 2024ರಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸರ್ಕಾರ ರಚಿಸಲಿದ್ದಾರೆ ಎಂದು ಹೇಳಿದ್ದಾರೆ.
ಎಷ್ಟೇ ಪಕ್ಷಗಳು ಪ್ರತಿಪಕ್ಷಗಳ ಸಭೆಗೆ ಬಂದರೂ ಅವು ಎಂದಿಗೂ ಒಂದಾಗಲು ಸಾಧ್ಯವಿಲ್ಲ. ಇಂದು ಪಾಟ್ನಾದಲ್ಲಿ ಫೋಟೋ ಸೆಷನ್ ಮಾತ್ರ ನಡೆಯುತ್ತಿದೆ. ಅವರು(ಪ್ರತಿಪಕ್ಷಗಳು) ಎಂದಿಗೂ ಒಂದಾಗಲು ಸಾಧ್ಯವಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಪ್ರಧಾನಿ ಮೋದಿ ಮತ್ತೊಮ್ಮೆ ಸರ್ಕಾರ ರಚಿಸುತ್ತಾರೆ ಎಂದು ಹೇಳಿದ್ದಾರೆ.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯೋಜಿಸಿದ್ದ ವಿರೋಧ ಪಕ್ಷದ ನಾಯಕರ ಸಭೆ ಇಂದು ಪಾಟ್ನಾದಲ್ಲಿ ನಡೆಯುತ್ತಿದ್ದು, 15ಕ್ಕೂ ಹೆಚ್ಚು ವಿರೋಧ ಪಕ್ಷಗಳು ಭಾಗವಹಿಸಿವೆ.