ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಅಂಗೀಕರಿಸಿದೆ. ಆದರೆ ಇದಕ್ಕೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಸಂಪೂರ್ಣ ವಿರೋಧ ವ್ಯಕ್ತಪಡಿಸಿವೆ.
ಈ ಬಗ್ಗೆ ಉತ್ತರ ನೀಡಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದು, ಅಹಿಂದ ( ಅಲ್ಪಸಂಖ್ಯಾತ, ಹಿಂದುಳಿದ, ದಲಿತರು) ಸಮಾವೇಶ ಆಯೋಜನೆ ಮಾಡಲಿದ್ದಾರೆ. ಜ.28ರಂದು ಚಿತ್ರದುರ್ಗದಲ್ಲಿ ಈ ಸಮಾವೇಶ ನಡೆಯಲಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಅಹಿಂದ ಸಮಾವೇಶ, ಚಿತ್ರದುರ್ಗ, ಹಾವೇರಿ ಮತ್ತು ಕೊಪ್ಪಳ ಹಾಗೂ ಉತ್ತರ ಕರ್ನಾಟಕದ ಕೆಲವು ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಸಹಾಯ ಮಾಡುವ ಸಾಧ್ಯತೆಯಿದೆ.