ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಮಂಡಿಸಿದ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ 2025 ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತು. ಇದೀಗ ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ದೂರು ನೀಡಿದೆ.
ಇಂದು ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ವಿರೋಧ ಪಕ್ಷ ಬಿಜೆಪಿ ನಿಯೋಗದಿಂದ ರಾಜಭವನದಲ್ಲಿ ಇಂದು ರಾಜಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಲಾಯಿತು.
ವಿಪಕ್ಷ ನಾಯಕರಾದ ಆರ್ ಅಶೋಕ್, ನಾರಾಯಣಸ್ವಾಮಿ ನೇತ್ರತ್ವದಲ್ಲಿ ದೂರು ಸಲ್ಲಿಸಲಾಗಿದೆ. ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.