ಎನ್‌ಐಎ ದಾಳಿಗೆ ವಿರೋಧ: ಕೇರಳದಲ್ಲಿ ನಾಳೆ ಬಂದ್ ಗೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಎನ್‌ಐಎ ಇಂದು 15 ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದು, ೪೫ ಮಂದಿಯನ್ನು ಬಂಧಿಸಿದೆ.
15 ರಾಜ್ಯಗಳ 93 ಸ್ಥಳಗಳಲ್ಲಿ ಇಡಿ, ಎನ್‌ಐಎ ಮತ್ತು ರಾಜ್ಯ ಪೊಲೀಸ್ ಪಡೆಗಳು ಶೋಧ ನಡೆಸಿದ್ದು, ಇದರನ್ನು ವಿರೋಧಿಸಿ ಕೇರಳದಲ್ಲಿ ಶುಕ್ರವಾರ ಪಿಎಫ್‌ಐ ಬಂದ್ (ಸ್ಥಗಿತ) ಘೋಷಿಸಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದೆ. ತುರ್ತು ಅಗತ್ಯ ಸೇವೆಗಳನ್ನು ಬಂದ್ ನಿಂದ ಹೊರಗಿಡಲಾಗಿದೆ.
ಕೇರಳದ ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಎ ಅಬ್ದುಲ್ ಸತಾರ್ ಮಾತನಾಡಿ, ಕೇಂದ್ರ ತನಿಖಾ ಸಂಸ್ಥೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗಳ ವಿರುದ್ಧ ಹೊಗೆ ಪರದೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇಂತಹ ಕಾರ್ಯಗಳ ಮೂಲಕ ಕೇಂದ್ರವು ವಾಸ್ತವವಾಗಿ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಸತಾರ್ ಉಲ್ಲೇಖಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!