ಲಂಡನ್​​ನಲ್ಲಿ ರಾಹುಲ್ ಹೇಳಿಕೆಗೆ ವಿರೋಧ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ವಾಗ್ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಲಂಡನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿವಾದಾತ್ಮಕ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿರುವ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ ಅವರು, ರಾಹುಲ್ ಬಾಬಾ ಲಂಡನ್​​ನಲ್ಲಿ ಭಾರತ ಪ್ರಜಾಪ್ರಭುತ್ವದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ‌. ಅವರು ಬಾರತ್ ಜೋಡೋ ಯಾತ್ರೆ ಮಾಡಿದರು. ಈ ಹಿಂದೆ ಭಾರತ್ ತೋಡೊ ಮಾಡಿದ್ದು ಯಾರು ಎಂದು ಅವರನ್ನು ಪ್ರಶ್ನಿಸಿದ್ದೆ ಎಂದು ಹೇಳಿದರು.

ಇದು ಹನುಮ ಜನಿಸಿದ ಪುಣ್ಯ ಭೂಮಿ. ಇಂಥ ಪುಣ್ಯಭೂಮಿಗೆ ಬರಲು ನನಗೆ ಅವಕಾಶ ಸಿಕ್ಕಿದ್ದು ಪುಣ್ಯ. ಉತ್ತರ ಭಾರದಲ್ಲಿ ಕಾಂಗ್ರೆಸ್ ಈಗಾಗಲೇ ಮನೆ ಸೇರಿದೆ. ಇತ್ತೀಚೆಗೆ ನಡೆದ ಮೂರು ರಾಜ್ಯಗಳ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ ತುಷ್ಟಿಕರಣ ರಾಜಕಾರಣ ಮಾಡುತ್ತಿದ್ದರೆ, ಕರ್ನಾಟಕದ ನಮ್ಮ ಸರ್ಕಾರ ಎಸ್​​​ಸಿ, ಎಸ್ಟಿ ಮೀಸಲಾತಿ ನೀಡಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಈ ಕೆಲಸ ಮಾಡಿರಲಿಲ್ಲ. ಮುಂಬರುವ ವಿಧಾನಸಭೆ ಚುನಾವಣೆ ನಮಗೆ ಸೆಮಿಫೈನಲ್ ಇದ್ದಹಾಗೆ‌. ಯಾಕೆಂದರೆ ಇದರ ನಂತರ ಲೋಕಸಭಾ ಚುನಾವಣೆ ಬರಲಿದೆ. ರಾಮ ಮಂದಿರ ನಿರ್ಮಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡೋಣ. ಉತ್ತರ ಪ್ರದೇಶ, ಗುಜರಾತ್​ ಜನ ಮತ್ತೆ ಮೋದಿಯನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!