Monday, March 27, 2023

Latest Posts

ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ವಿರೋಧ: ಸೋಮವಾರ ಬೆಂಗಳೂರಿನಲ್ಲಿ ಸಂಪೂರ್ಣ ಆಟೋ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ (Rapido bike taxi) ನಿಷೇಧಕ್ಕೆ ಆಗ್ರಹಿಸಿ ಸೋಮವಾರ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ಚಾಲಕರು ನಿರ್ಧರಿಸಿದ್ದಾರೆ.

ಹೀಗಾಗಿ ಭಾನುವಾರ ಮಧ್ಯರಾತ್ರಿ 12 ರಿಂದ 24 ಗಂಟೆಗಳ ಕಾಲ ನಗರದಲ್ಲಿ ಆಟೋ ಸಂಚಾರ ಸ್ಥಗಿತಗೊಳ್ಳಲಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತೀರ್ಮಾನಿಸಿದ್ದಾರೆ. ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಬೈಕ್ ಟ್ಯಾಕ್ಸಿಯಿಂದ ನಮಗೆ ಬಾಡಿಗೆ ಸಿಗುತ್ತಿಲ್ಲ. ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಯೆಲ್ಲೋ ಬೋರ್ಡ್ ಹಾಕಿಕೊಂಡು ಬೈಕ್ ಟ್ಯಾಕ್ಸಿ ಸೇವೆ ಸೇವೆ ನೀಡಲಿ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ಓಲಾ (Ola), ಊಬರ್‌ನಲ್ಲೂ (Ubar) ಆಟೋ ಸೇವೆ ಲಭ್ಯವಿರುವುದಿಲ್ಲ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!