September 23, 2026
Wednesday, September 23, 2026
spot_img

ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ವಿರೋಧ: ಅಹಿಂದ ನಾಯಕರಿಂದ ಹೈಕಮಾಂಡ್ ವಿರುದ್ಧ ಆಕ್ರೋಶ

ಹೊಸದಿಗಂತ ವರದಿ ಕಲಬುರಗಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಹಿಂದ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಕರ್ನಾಟಕ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯದ ನಾಯಕತ್ವವನ್ನು ಕುಗ್ಗಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನಪರ ಹಾಗೂ ಹಿಂದುಳಿದ ವರ್ಗಗಳ ಪರ ಹೋರಾಟ ನಡೆಸಿದ ನಾಯಕರು ಎಂದು ಹೇಳಿದರು.

ಇದನ್ನೂ ಓದಿ:

ಇಂತಹ ನಾಯಕರ ವಿರುದ್ಧ ಅನಗತ್ಯ ರಾಜೀನಾಮೆ ಚರ್ಚೆ ಹುಟ್ಟುಹಾಕುವುದು ಸರಿಯಲ್ಲ.ಕಾಂಗ್ರೆಸ್ ಹೈಕಮಾಂಡ್ ಕೂಡ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ನಾಳೆ ಪ್ರತಿಭಟನೆ

ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಗುರುವಾರ ನಗರದಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದ ಗುರುನಾಥ ಪೂಜಾರಿ, ಜಿಲ್ಲೆಯ ವಿವಿಧ ತಾಲೂಕುಗಳಿಂದ ಕುರುಬ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಅಹಿಂದ ನಾಯಕತ್ವದ ಪರವಾಗಿ ಏಕತೆ ಪ್ರದರ್ಶಿಸುವ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !