ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆಗೆ ಅವಕಾಶವಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶದ ಕುರಿತಾಗಿ ಮಾಧ್ವ ಅನುಯಾಯಿಗಳು ಅಸಮಾಧಾನ ಹೊರಹಾಕಿದ್ದಾರೆ.
ಉಡುಪಿ ಮತ್ತು ಇತರೆಡೆಯ ಮಾಧ್ವ ಮಠಗಳಲ್ಲಿ ತಪ್ತ ಮುದ್ರಾಧಾರಣೆ ಮಾಡುವುದು ಅನಾದಿಕಾಲದ ಸಂಪ್ರದಾಯವಾಗಿದ್ದು, ಸರ್ಕಾರದ ಸುತ್ತೋಲೆಯ ವಿರುದ್ಧ ಮಾಧ್ವ ಮತಸ್ಥರಿಂದ ವಿರೋಧ ವ್ಯಕ್ತವಾಗಿತು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಈ ಸುತ್ತೋಲೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು. ಇದೀಗ ಧಾರ್ಮಿಕ ದತ್ತಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಸುತ್ತೋಲೆಯನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.
ಪೇಜಾವರ ಶ್ರೀ ಸ್ವಾಗತ
ಚರ್ಚೆ ಮತ್ತು ಗೊಂದಲಗಳಿಗೆ ಕಾರಣವಾಗಿದ್ದ ಈ ಸುತ್ತೋಲೆಯನ್ನು ಸರ್ಕಾರ ಹಿಂಪಡೆದಿರುವುದರಕ್ಕೆ ಉಡುಪಿಯ ಪೇಜಾವರ ಮಠಜ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸ್ವಾಗತಿಸಿದ್ದಾರೆ ಮತ್ತು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವೆ ಜೊಲ್ಲೆ ಮತ್ತು ಶಾಸಕ ರಘುಪತಿ ಭಟ್ಟರಿಗೆ ಶ್ರೀಗಳು ಅಭಿನಂದನೆ ಸಲ್ಲಿಸಿದ್ದಾರೆ.