ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಜಮೀನುಗಳನ್ನು ವಕ್ಫ್ ಮಂಡಳಿ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು, ರಾಜಕಾರಣಿಗಳು ಲೂಟಿ ಮಾಡಿದ್ದಾರೆ. ಇಂಥ ಕಾಂಗ್ರೆಸ್ ಮುಖಂಡರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಸಾವಿರ ವರ್ಷಗಳ ಇತಿಹಾಸ ಇರುವ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳ ಜಮೀನು, ರಾಜ್ಯದ ಲಕ್ಷಾಂತರ ರೈತರ ಜಮೀನನ್ನು ಸಹ ವಕ್ಫ್ ಮಂಡಳಿ ಹೆಸರು ಹೇಳಿಕೊಂಡು ಕಿತ್ತುಕೊಳ್ಳುವ ಕೆಲಸ ನಡೆದಿತ್ತು.
ಹೀಗಾಗಿ ಕೇಂದ್ರದಲ್ಲಿ ಪ್ರಧಾನಿ ಮೋದಿ ಸಂಸತ್‌ನ ಉಪ ಸಮಿತಿ ರಚಿಸಿದ್ದರು. ವಕ್ಫ್ ಮಂಡಳಿ ಹೆಸರಿನಲ್ಲಿ ದೇಶ, ರಾಜ್ಯದ ಜನರಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಈ ಉಪ ಸಮಿತಿ ರಚಿಸಲಾಗಿತ್ತು ಎಂದು ಹೇಳಿದರು.