ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಏಪ್ರಿಲ್ 19 ರಂದು ಹೈದರಾಬಾದ್ನ ದಾರುಸ್ಸಲಾಂನಲ್ಲಿ ಪ್ರತಿಭಟನಾ ಸಭೆ ಆಯೋಜಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಈ ಕಾಯ್ದೆಯು ವಕ್ಫ್ ಸಂಸ್ಥೆಗಳ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಯಾವುದೇ ಕಾರಣಕ್ಕೂ ಇದನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಪ್ರತಿಭಟನಾ ಸಭೆಯಲ್ಲಿ ತೆಲಂಗಾಣ, ಆಂಧ್ರಪ್ರದೇಶದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು ಹಾಗೂ ಎರಡೂ ರಾಜ್ಯಗಳ ಮುಸ್ಲಿಂ ಸಂಘಟನೆಗಳ ಸದಸ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.