‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾಗೆ ವಿರೋಧ: ಬ್ಯಾನ್ ಮಾಡಿ ಎಂದು ಪ್ರಧಾನಿ ಮೋದಿಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಕೀಯ ಹಿನ್ನೆಲೆಯ ಸಿನಿಮಾಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗೋದು ಹೊಸ ವಿಷಯ ಏನಲ್ಲ.
ಇದೀಗ ವೈ ಐ ಕಿಲ್ಡ್ ಗಾಂಧಿ( Why i killed Gandhi)  ಸಿನಿಮಾಗೂ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಸಿನಿಮಾ ನಿಷೇಧ ಮಾಡಬೇಕು ಎಂದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ವತಿಯಿಂದ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ.
ಮಹಾರಾಷ್ಟ್ರದಲ್ಲಿ ಈ ಸಿನಿಮಾಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ಬ್ಯಾನ್ ಆಗಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ಸಿನಿಮಾ ಒಟಿಟಿ ಮೂಲಕ ರಿಲೀಸ್ ಆಗಲಿದೆ. ರಿಲೀಸ್‌ಗೂ ಮುನ್ನವೇ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾಗಳಲ್ಲಿ ಒನ್ ಸೈಡ್ ಮಾಹಿತಿ ಮಾತ್ರ ಇರುತ್ತದೆ ಎಂದು ಕೆಲವರು ಅಭಿಪ್ರಾಯಪಟ್ಟರೆ, ಎಲ್ಲಾ ರೀತಿ ಸಿನಿಮಾಗಳೂ ತೆರೆ ಮೇಲೆ ಬರುತ್ತವೆ. ಅದನ್ನು ನೋಡುವುದು ಬಿಡುವುದು ಅವರ ವೈಯಕ್ತಿಕ ನಿರ್ಧಾರ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಸಂಸದ ಅಮೋಲ್ ಕೋಹ್ಲೆ ಈ ಸಿನಿಮಾದಲ್ಲಿ ನಾಥೂರಾಮ್ ಗೋಡ್ಸೆ ಪಾತ್ರ ನಿರ್ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!