ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು, ಮೊದಲ ದಿನವೇ ಪ್ರತಿಪಕ್ಷಗಳ ಗದ್ದಲಕ್ಕೆ ವೇದಿಕೆ ಮಾಡಿಕೊಟ್ಟಿದೆ. ಉಭಯ ಸದನಗಳ ಕಲಾಪ ಬುಧವಾರಕ್ಕೆ ಮುಂದೂಡಿಕೆಯಾಗಿವೆ.
ಅಮೆರಿಕದ ನ್ಯಾಯಾಲಯದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಉತ್ತರಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಎಐಎಂಐಎಂ ಸೇರಿ ವಿಪಕ್ಷಗಳು ಘೋಷಣೆ ಕೂಗಿದವು. ಪರಿಣಾಮ ಕಲಾಪ ನಡೆಸಲು ಸಾಧ್ಯವಾಗದೇ ಸದನಗಳ ಕಲಾಪವನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಯಿತು.