Thursday, August 18, 2022

Latest Posts

ನಾಮಪತ್ರ ಸಲ್ಲಿಸಿದ ಯಶವಂತ್‌ ಸಿನ್ಹಾ, ರಾಹುಲ್‌ ಗಾಂಧಿ ಉಪಸ್ಥಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಇಂದು (ಸೋಮವಾರ) ಸಂಸತ್‌ ಭವನದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಅನೆಕ್ಸ್‌ನಲ್ಲಿ ವಿರೋಧ ಪಕ್ಷದ ನಾಯಕರು ಸಭೆ ಸೇರಿ, ನಾಮಪತ್ರಕ್ಕೆ ಸಹಿ ಹಾಕಿದ್ದಾರೆ. ಅದಾದ ಬಳಿಕ ವಿಪಕ್ಷ ನಾಯಕರೆಲ್ಲ ಯಶವಂತ್ ಸಿನ್ಹಾ ಅವರೊಂದಿಗೆ ರ್ಯಾಲಿ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸಂಸತ್ ಆವರಣದಲ್ಲಿರುವ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!