ರಾಜ್ಯ ಸರಕಾರದಿಂದ ಕರಸೇವಕರ ಮೇಲೆ ದಬ್ಬಾಳಿಕೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರದಿಂದ ಕರಸೇವಕರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ ಇದನ್ನ ತೋರಿಸಿವೆ ಎಂದು ತಿಳಿಸಿದರು.

ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತಾ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡೋ ಕೆಲಸ ಮಾಡ್ತಿದೆ ಎಂದು ಟೀಕಿಸಿದರು.

ಅತ್ತ ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕರಸೇವಕರ ಮೇಲೆ ದೌರ್ಜನ್ಯ. ಇದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು.

ಅಧಿಕಾರ ದುರುಪಯೋಗ, ಸುಳ್ಳು ಕೇಸ್ ಮೂಲಕ ಕರಸೇವಕರ ಬಂಧನ ವಿಚಾರವಾಗಿ ಸಿಎಂ, ಗೃಹ ಸಚಿವರು ಅದನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ. ಹರಿಪ್ರಸಾದ್ ಗೋಧ್ರಾ ರೀತಿ ಆಗುತ್ತೆ ಅಂತಾ ಹೇಳಿದ್ದಾರೆ. ಪರ-ವಿರೋಧ ಎರಡು ಕಡೆ ನಡೆಯುತ್ತಿದೆ. ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ತಿದೆ. ಬಿಜೆಪಿ ನಾಯಕರು, ಕಾರ್ಯಕರ್ತರು, ಸಂಘಟನೆಗಳ ಮತ್ತು ವ್ಯಕ್ತಿಗಳ ಮೇಲೆ ಕೇಸ್ ಹಾಕುತ್ತಿದ್ದು, ಅಧಿಕಾರ ದುರುಪಯೋಗ ಆಗ್ತಿದೆ. ಇದಕ್ಕೆ ಬಿಜೆಪಿ ಪ್ರತಿಭಟನೆ ಪ್ರಾರಂಭ ಮಾಡಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!