ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಾಯುಭಾರ ಕುಸಿತದ ಪರಿಣಾಮ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹೀಗಾಗಿ ಸೆಪ್ಟೆಂಬರ್ 30 ರಂದು ಆರೆಂಜ್ ಮತ್ತು ಅಕ್ಟೊಬರ್ 1, 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ – ವಾಯವ್ಯಕ್ಕೆ ಚಲಿಸಲಿದೆ. ಇದರ ಪರಿಣಾಮ ಮುಂದಿನ ಮೂರು ದಿನ ಉತ್ತರ ಒಳನಾಡಿನ ಜಿಲ್ಲೆಯಾದ ಕಲಬುರಗಿ ಜಿಲ್ಲೆಗೆ ಹಾಗೂ ನಾಳೆ, ನಾಡಿದ್ದು ಬೀದರ್, ವಿಜಯಪುರ ಜಿಲ್ಲೆಗೆ ಮತ್ತು ಅಕ್ಟೊಬರ್ 2 ರಂದು ಯಾದಗಿರಿ, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಎರಡು ದಿನ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ ಸೆ 30 ರಂದು ಯೆಲ್ಲೋ ಅಲರ್ಟ್ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.