ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ ಆರ್ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ಬೆಂಗಳೂರಿನ ಆರ್ಕಿಡ್ಸ್‌ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಶಾಲೆ, ಸಹಕಾರನಗರ ಶಾಖೆಯ ವಿದ್ಯಾರ್ಥಿಗಳಾದ ಶ್ರೇಯಸ್ (10ನೇ ತರಗತಿ) ಹಾಗೂ ಅಗಸ್ತ್ಯ ಮಂಜುನಾಥ್ (8ನೇ ತರಗತಿ), ಸಿ.ಐ.ಎಸ್.ಸಿ.ಇ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ವೈಯುಕ್ತಿಕ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಟೇಕ್ವಾಂಡೋ 55-59 ಕೆಜಿ ವಿಭಾಗದಲ್ಲಿ ಭಾಗವಹಿಸಿದ ಶ್ರೇಯಸ್ ಮೊದಲ ಸ್ಥಾನ ಗಳಿಸಿದರೆ, ಅಗಸ್ತ್ಯ ಮಂಜುನಾಥ್ ಈಜು ಸ್ಪರ್ಧೆಯ ಫ್ರೀಸ್ಟೈಲ್ ಅಂಡರ್ 14 ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಈ ವಿದ್ಯಾರ್ಥಿಗಳು ಮುಂಬರುವ ಡಿಸೆಂಬರ್ ನಲ್ಲಿ ಜರುಗಲಿರುವ ಸ್ಕೂಲ್ಸ್ ಗೇಮ್ ಫೆಡರೇಶನ್ ಆಫ್ ಇಂಡಿಯಾದ 67ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಐ.ಸಿ.ಎಸ್.ಇ ಯನ್ನು ಪ್ರತಿನಿಧಿಸಲಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!