ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಅನುಮತಿ ಇಲ್ಲದೆ ನಿರ್ಮಿಸಿರುವ ಆರಾಧನಾ ಕೇಂದ್ರಗಳನ್ನು ನೆಲಸಮಗೊಳಿಸಲು ಕೇರಳ ಹೈಕೋರ್ಟ್ ಆದೇಶ ನೀಡಿದೆ.
ಪ್ಲಾಂಟೇಶನ್ ಕಾರ್ಪೋರೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿವಿ ಕುಂಞಿಞ ಕೃಷ್ಣನ್ ಅವರು ಈ ಆದೇಶ ನೀಡಿದ್ದಾರೆ. ಯಾವುದೇ ಧರ್ಮದ ಅನುಯಾಯಿಗಳು ಪೂಜೆಗಾಗಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲು ಅನುಮತಿ ನೀಡಬಾರದು, ಕಂಬ, ಮರಗಳಲ್ಲಿ ದೇವರು ಇದ್ದಾನೆ ಎಂದು ನಂಬಬಾರದು ಎಂದು ನ್ಯಾಯಾಲಯ ಹೇಳಿದೆ.
ಸರ್ಕಾರಿ ಭೂಮಿ ಒತ್ತುವರಿ ಮಾಡಿ ಆರಾಧನಾ ಸ್ಥಳ ನಿರ್ಮಿಸುವುದು ಕಾನೂನುಬಾಹಿರ. ಇವುಗಳನ್ನು ಕೆಡವಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುತ್ತದೆ ಎಂಬ ಸರ್ಕಾರದ ನಿಲುವು ಒಪ್ಪಲಾಗದು.ಅಕ್ರಮ ಕಟ್ಟಡಗಳನ್ನು ಪತ್ತೆ ಮಾಡಲು ಮುಖ್ಯ ಕಾರ್ಯದರ್ಶಿ ಆದೇಶ ನೀಡಬೇಕು, ಜಿಲ್ಲಾಧಿಕಾರಿಗಳು ಆರು ತಿಂಗಳೊಳಗೆ ಉತ್ತರ ವರದಿ ಸಲ್ಲಿಸಬೇಕು, ಒಂದು ವರ್ಷದೊಳಗೆ ನೆಲಸಮ ಸೇರಿದಂತೆ ಕ್ರಮ ಕೈಗೊಳ್ಳಬೇಕು ಮತ್ತು ಮುಖ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ತಿಳಿಸಬೇಕು. ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕೆಂದೂ ನ್ಯಾಯಾಲಯ ಆದೇಶಿಸಿದೆ.