ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಗೆ ಆದೇಶ: ಅಧಿಕಾರಿಗಳ ತಲೆದಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ತನಿಖಾ ತಂಡ ರಚಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ. ಹಗರಣದ ಬಗ್ಗೆ 15 ದಿನಗಳ ಒಳಗೆ ಸಮಗ್ರ ವರದಿ ನೀಡಲು ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದ್ದು, ತನಿಖಾ ವರದಿಯೊಂದಿಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಸ್ಪಷ್ಟ ಅಭಿಪ್ರಾಯ ನೀಡಲು ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ಮುಡಾದಲ್ಲಿ 5000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಗಳು ಕೇಳಿಬಂದಿದೆ .

ತನಿಖಾ ತಂಡಕ್ಕೆ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ ಅಧ್ಯಕ್ಷರಾಗಿದ್ದು, ಹೆಚ್ಚುವರಿ ನಿರ್ದೇಶಕ ಎಂ.ಸಿ. ದಿನೇಶ್, ಶಶಿಕುಮಾರ್, ಜಂಟಿ ನಿರ್ದೇಶಕಿ ಶಾಂತಲಾ, ಉಪ ನಿರ್ದೇಶಕ ಪ್ರಕಾಶ್ ಸದಸ್ಯರಾಗಿದ್ದಾರೆ. ಇನ್ನು ತನಿಖಾ ತಂಡಕ್ಕೆ ನೆರವು ನೀಡಲು ಮುಡಾ ಆಯುಕ್ತರಿಗೆ ಕಟ್ಟಪ್ಪಣೆ ನೀಡಲಾಗಿದೆ. ಮುಡಾಕ್ಕೆ ನಿಯಮ ಬಾಹಿರವಾಗಿ ನಷ್ಟ ಉಂಟು ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆ ತನಿಖೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಅಧಿಕಾರಿಗಳ ತಲೆದಂಡ
50:50 ಅನುಪಾತದಡಿ ಹಂಚಿಕೆ ಆಗಿರುವ ನಿವೇಶನಗಳ ರದ್ದು ಮಾಡಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ತಲೆದಂಡ ಆಗಿದ್ದು, ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯದರ್ಶಿ ಶೇಖರ್ ಸೇರಿದಂತೆ ಶಾಮೀಲಾದ ಅಧಿಕಾರಿಗಳ ಎತ್ತಂಗಡಿಗೆ ಸರ್ಕಾರ ಆದೇಶ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಗರಣ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಚಿವ ಭೈರತಿ ಸುರೇಶ ಅವರು ಇಂದು ದಿಢೀರ್‌ ಮೈಸೂರಿಗೆ ಧಾವಿಸಿದ್ದರು. ಅವರು ಮುಡಾ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಬೆನ್ನಲ್ಲೇ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!