ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯ ಸರಕಾರದಿಂದ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರಿಗೆ ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಸರ್ಕಾರ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಜೂನ್.13ರವರೆಗೆ ಕಚೇರಿ ಹಾಜರಾತಿಯಿಂದ ವಿನಾಯ್ತಿ ನೀಡಿ ಆದೇಶಿಸಿದೆ.
ಈ ಕುರಿತಂತೆ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಕಾಲ ಕಾಲಕ್ಕೆ ನೀಡಿರುವ ನಿರ್ದೇಶನಗಳ ಅನ್ವಯ ದಿನಾಂಕ 06-06-2021ರವರೆಗೆ ಸಚಿವಾಲಯದ ಅಧಿಕಾರಿ, ನೌಕರರಿಗೆ ಹಾಜರಾತಿಯಿಂದ ವಿನಾಯ್ತಿಯನ್ನು ಜೂನ್.6ರವರೆಗೆ ನೀಡಲಾಗಿತ್ತು. ಆದರೇ ಸರ್ಕಾರ ದಿನಾಂಕ 14-06-2021ರ ಬೆಳಿಗ್ಗೆ 6 ಗಂಟೆಯವರಿಗೆ ಲಾಕ್ ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಈ ಹಿನ್ನಲೆಯಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರುಗಳಿಗೆ ದಿನಾಂಕ 13-06-2021ರವರೆಗೆ ಕಚೇರಿ ಹಾಜರಾತಿಯಿಂದ ವಿನಾಯ್ತಿಯನ್ನು ಮುಂದುವರೆಸಲಾಗಿದೆ. ಈ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು. ಸಂಬಂಧ ಪಟ್ಟ ಶಾಖೆಯ ಮೇಲಧಿಕಾರಿಗಳು ಇಚ್ಛಿಸಿದಲ್ಲಿ ಅಗತ್ಯ ಮತ್ತು ತುರ್ತು ಸಂದರ್ಭವಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಆಯಾ ಅಧಿಕಾರಿ, ನೌಕರರುಗಳು ಯಾವುದೇ ಕಾರಣಗಳನ್ನು ನೀಡದೇ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss