ದೆಹಲಿ ಕುತುಬ್​ ಮಿನಾರ್​ ಉತ್ಖನನಕ್ಕೆ ಆದೇಶ: ಕೇಂದ್ರ ಸಚಿವ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಪ್ರಕರಣ ಸುಪ್ರೀಂಕೋರ್ಟ್​ ಅಂಗಳದಲ್ಲಿರುವಾಗಲೇ ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂದು ವರದಿಗಳು ಹರಿದಾಡುತ್ತಿದೆ.
ಆದರೆ ಈ ವರದಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಂಸ್ಕೃತಿ ಇಲಾಖೆ ಸಚಿವ ಜಿ.ಕೆ. ರೆಡ್ಡಿ, ಅಂತಹ ಯಾವುದೇ ನಿರ್ದೇಶನವನ್ನು ಸರ್ಕಾರ ನೀಡಿಲ್ಲ. ಪ್ರಕರಣ ಸುಪ್ರೀಂಕೋರ್ಟ್​ನಲ್ಲಿದೆ ಎಂದು ಅವರು ಹೇಳಿದ್ದಾರೆ.
ಕುತುಬ್ ಮಿನಾರ್ ಅನ್ನು ಹಿಂದು ಚಕ್ರವರ್ತಿ ರಾಜಾ ವಿಕ್ರಮಾದಿತ್ಯನಿಂದ ನಿರ್ಮಿಸಲಾಗಿದೆ. ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ಕುತುಬ್ ಅಲ್-ದೀನ್ ಐಬಕ್ ನಿರ್ಮಿಸಿಲ್ಲ ಎಂದು ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಪ್ರತಿಪಾದಿಸಿದ ನಂತರ ವಿವಾದ ಭುಗಿಲೆದ್ದಿದೆ. ಸಂಕೀರ್ಣದಲ್ಲಿ ಹಿಂದು ದೇವತೆಗಳ ವಿಗ್ರಹಗಳು ಕಂಡು ಬಂದಿವೆ ಎಂದೂ ಹೇಳಲಾಗಿದೆ.
ದೆಹಲಿಯ ಕುತುಬ್​ ಮಿನಾರ್​ ಈ ಹಿಂದೆ ಹಿಂದು ದೇವಾಲಯವಾಗಿತ್ತು. ಅದನ್ನು ಉತ್ಖನನ ಮಾಡಬೇಕು ಎಂದು ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಈ ಎಲ್ಲದರ ನಡುವೆ ಕೇಂದ್ರ ಸಂಸ್ಕೃತಿ ಇಲಾಖೆ ಈ ಬಗ್ಗೆ ಆದೇಶಿಸಿದೆ ಎಂದು ವರದಿ ಎಲ್ಲೆಡೆ ಹರಿದಾಡಿತ್ತು. ಅಂತಿಮವಾಗಿ ವ ಕೇಂದ್ರ ಸಂಸ್ಕೃತಿ ಇಲಾಖೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!