ಮೈಕ್ರೋ ಫೈನಾನ್ಸ್​ ಕಿರುಕುಳ ವಿರುದ್ಧ ಸುಗ್ರೀವಾಜ್ಞೆ: ಕೆಲ ಅಂಶ ಬದಲಾವಣೆಗೆ ಮುಂದಾದ ರಾಜ್ಯ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ಮುಂದಾದ ರಾಜ್ಯ ಸರಕಾರ ಸದ್ಯ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ‘ಸಣ್ಣ ಸಾಲ’ ಎಂಬ ಪದ ಸೇರಿಸಿದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು, ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಸುಗ್ರೀವಾಜ್ಞೆ ಜಾರಿ ಮಾಡಲು ನಿರ್ಧರಿಸಿತ್ತು.

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ, ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ, ಸುಗ್ರೀವಾಜ್ಞೆ 2025 ಎಂದು ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸ್ತಾವಿತ ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ ಜೈಲು ಶಿಕ್ಷೆಯನ್ನು 3 ವರ್ಷ ಇದ್ದದ್ದನ್ನು 10 ವರ್ಷಕ್ಕೆ ಹೆಚ್ಚಿಸಲಾಗಿದೆ. ದಂಡವನ್ನು 5 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಕ್ಷೆ ಪ್ರಮಾಣ ಹೆಚ್ಚಿಸಲು ಶಿಫಾರಸು ಮಾಡಿದ್ದು, ಕಠಿಣ ಕ್ರಮದ ನಿರೀಕ್ಷೆ ಹೆಚ್ಚಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!