ಸಂಘಟಿತ ಪ್ರದರ್ಶನ: ಬಾಂಗ್ಲಾದೇಶ ವಿರುದ್ಧ ಗೆದ್ದು ಸೆಮೀಸ್‌ಗೆ ಲಗ್ಗೆಯಿಟ್ಟ ಪಾಕಿಸ್ತಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಂಘಟಿತ ಪ್ರದರ್ಶನ ತೋರಿದ ಪಾಕಿಸ್ತಾನ ತಂಡವು ಬಾಂಗ್ಲಾದೇಶ ಎದುರು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

ಬಾಂಗ್ಲಾದೇಶ ನೀಡಿದ್ದ 128 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಕೇವಲ 5 ವಿಕೆಟ್ ಕಳೆದುಕೊಂಡು 11 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

ನಾಯಕ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಮೊದಲ 10.3 ಓವರ್‌ಗಳಲ್ಲಿ 57 ರನ್‌ಗಳ ಜತೆಯಾಟವಾಡುವ ಮೂಲಕ ದಿಟ್ಟ ಆರಂಭ ಒದಗಿಸಿಕೊಟ್ಟರು. ರಕ್ಷಣಾತ್ಮಕ ಆಟವಾಡಿದ ಬಾಬರ್ ಅಜಂ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮೊಹಮ್ಮದ್ ರಿಜ್ವಾನ್ 32 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ನವಾಜ್ ಕೇವಲ 4 ರನ್ ಬಾರಿಸಿ ರನೌಟ್ ಆದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೊಹಮ್ಮದ್ ಹ್ಯಾರಿಸ್(31) ಹಾಗೂ ಶಾನ್ ಮಸೂದ್(24*) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ಪಾಕಿಸ್ತಾನ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!