ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.
‘ಹಿರಿಯ ಸಂಸದರಾದ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ ಎಂದು ತಿಳಿದು ದುಃಖವಾಯಿತು.ಅವರು ನೆಲಕ್ಕೆ ಬೇರೂರಿದ್ದ ಹಾಗೂ ಜನರ ಕಲ್ಯಾಣಕ್ಕೆ ಬದ್ಧರಾಗಿರುವ ನಾಯಕರು. ಮೃತರ ಕುಟುಂಬಕ್ಕೆ, ಸ್ನೇಹಿತರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪವಿದೆ’ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Saddened by the demise of Rajya Sabha MP Shri Oscar Fernandes Ji. In this sad hour, my thoughts and prayers are with his family and well-wishers. May his soul rest in peace: PM @narendramodi
— PMO India (@PMOIndia) September 13, 2021
‘ಆಸ್ಕರ್ ಫೆರ್ನಾಂಡಿಸ್ ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳೊಂದಿಗೆ ಸಂತಾಪವಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
ಆಸ್ಕರ್ ಫೆರ್ನಾಂಡಿಸ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಫೆರ್ನಾಂಡಿಸ್ ಅವರ ನಿಧನ ನನಗೆ ವೈಯಕ್ತಿಕ ನಷ್ಟ. ಅವರು ಕಾಂಗ್ರೆಸ್ ಪಕ್ಷದಲ್ಲಿ ಅನೇಕರಿಗೆ ಮಾರ್ಗದರ್ಶಕರಾಗಿದ್ದರು. ಅವರ ಕೊಡುಗೆಗಳನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.