Wednesday, August 10, 2022

Latest Posts

ಆಸ್ಕರ್ ಫೆರ್ನಾಂಡಿಸ್ ನಿಧನ: ಪೇಜಾವರ ಶ್ರೀ ಸಂತಾಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಉಡುಪಿ:

ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ‌.
ಉಡುಪಿ ಲೋಕಸಭಾ ಸದಸ್ಯರಾಗಿ ಬಹುವರ್ಷಗಳ ಕಾಲ ಸೇವೆ ಸಲ್ಲಿಸಿದ ಆಸ್ಕರ್ ಫೆರ್ನಾಂಡಿಸ್, ಕೇಂದ್ರ ಸಚಿವರಾಗಿಯೂ ಸಲ್ಲಿಸಿದ ಸೇವೆ ಅಪಾರವಾದುದು. ಯೋಗ ವಿದ್ಯೆಯಲ್ಲಿ ವಿಶೇಷ ಪರಿಣತಿ ಹೊಂದಿದ್ದ ಅವರು, ಗೋವಿನ ಉತ್ಪನ್ನಗಳ ಔಷಧೀಯ ಮಹತ್ವಗಳ ಬಗ್ಗೆಯೂ ಸಂಸತ್ ಸದಸದಲ್ಲಿ ವಿಚಾರ ಮಂಡಿಸಿರುವುದನ್ನು ಗಮನಿಸಿದ್ದೇವೆ. ಪೇಜಾವರ ಮಠವೂ ಸೇರಿದಂತೆ ಉಡುಪಿಯ ಎಲ್ಲ ಮಠಗಳೊಡನೆ ಆತ್ಮೀಯ ಸಂಬಂಧವನ್ನೂ ಹೊಂದಿದ್ದರು. ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಆಸ್ಕರ್ ಫೆರ್ನಾಂಡಿಸ್ ಅವರ ನಿಧನದಿಂದ ನಾಡು ಓರ್ವ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಧತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ ಎಂದು ಪೇಜಾವರ ಶ್ರೀಗಳು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss