spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಸ್ಕರ್ ಫೆರ್ನಾಂಡಿಸ್ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿ. ಕೆ. ಶಿವಕುಮಾರ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಉಡುಪಿ:

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕರಾಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರೊಬ್ಬ ದೊಡ್ಡ ಆಸ್ತಿ. ಅವರೊಬ್ಬ ಸಜ್ಜನಿಕೆಯ, ಅಜಾತ ಶತ್ರುವಾಗಿದ್ದ ಅವರಿಗೆ ಪಕ್ಷದ ಪ್ರಾಮಾಣಿಕತೆ, ಜೊತೆಗೆ ನಾಯಕತ್ವದಲ್ಲಿದ್ದ ನಿಷ್ಠೆ ಅಪಾರವಾದುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಉಡುಪಿ ಡಿಸಿಸಿ ಕಚೇರಿಯಲ್ಲಿ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.
ಆಸ್ಕರ್ ಫೆರ್ನಾಂಡಿಸ್ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಾವು ಬಂದಿದ್ದೇವೆ. ನನಗೂ ಆಸ್ಕರ್ ಅವರಿಗೆ 42 ವರ್ಷಗಳ ಸಂಬಂಧ. ಅವರು ಲೋಕಸಭಾ ಸದಸ್ಯರಾಗಿ, ವಿದ್ಯಾಾರ್ಥಿ ಘಟಕದ ನ್ಯಾಶನಲ್ ಕೌನ್ಸಿಲ್ ಸದಸ್ಯರಾಗಿದ್ದರು. ನಾನು ಅವರ ಭೇಟಿಗಾಗಿ ಉಡುಪಿಗೆ ಬರುತ್ತಿದ್ದೆ. ಅವರಿಗೆ ಯಾರ ಮನಸ್ಸು ನೋಯಿಸುವುದು ಇಷ್ಟವಿರಲಿಲ್ಲ. ಇಡೀ ದೇಶದುದ್ದಕ್ಕೂ ಸಾವಿರಾರು ಮಂದಿ ಕಾರ್ಯಕರ್ತರು, ನಾಯಕರಿಗೆ ಅವರ ಅರ್ಹತೆಗೆ ತಕ್ಕಂತೆ ಗೌರವವನ್ನು ಕೊಟ್ಟ ಒಬ್ಬ ಏಕೈಕ ವ್ಯಕ್ತಿ ಆಸ್ಕರ್ ಎಂದು ನುಡಿನಮನ ಸಲ್ಲಿಸಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಕಳೆದ 50 ವರ್ಷಗಳಲ್ಲಿ ಅವರಿಗೆ ಸಿಕ್ಕ ಅವಕಾಶದಲ್ಲಿ ಪಕ್ಷಕ್ಕೆ ಕೊಡುಗೆಯನ್ನು ಕೊಟ್ಟಿದ್ದಾರೆ. ತಮ್ಮ ಮೇಲೆ ಯಾವುದೇ ಆರೋಪವನ್ನು ಮಾಡಲು ಅವಕಾಶವಿಲ್ಲದಂತೆ ಅವರು ಕಾರ್ಯನಿರ್ವಹಿಸಿದ್ದಾರೆ. ಕಷ್ಟಕಾಲದಲ್ಲಿ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ನಂತರ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿದ್ದು, ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಚುನಾವಣಾ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದು ದೇಶದಾದ್ಯಂತ ಓಡಾಡಿ ವಿವಿಧ ಜವಾಬ್ದಾರಿಯುತ ಸ್ಥಾಾನಗಳನ್ನು ನಿರ್ವಹಿಸಿದ್ದಾರೆ. ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ. ಇದು ಬರೀ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟ ಎಂದು ಡಿಕೆಶಿ ತಿಳಿಸಿದರು.
ಸೆ. 16: ಬೆಂಗಳೂರಲ್ಲಿ ಅಂತಿಮ ದರ್ಶನ
ಸಾರ್ವಜನಿಕರಿಗೆ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸೆ. 16ರಂದು ಬೆಳಗ್ಗೆ 9ರಿಂದ 12ಗಂಟೆಯವರೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ಅನೇಕ ರಾಷ್ಟ್ರೀಯ ನಾಯಕರು ಕೂಡ ಅಂದು ಅಲ್ಲಿ ಬರುತ್ತಾರೆ. ರಾಜ್ಯದ ವಿವಿಧ ಮೂಲೆಗಳಿಂದ ಕಾರ್ಯಕರ್ತರು ಅವರ ಕೊನೆಯ ದರ್ಶನಕ್ಕೆ ಬಯಸುವವರು ಆಗಮಿಸಬಹುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss