Wednesday, August 10, 2022

Latest Posts

ಆಸ್ಕರ್ ಫೆರ್ನಾಂಡಿಸ್ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿದ್ದರು: ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ತಮ್ಮ ಕೊನೆಯ ಉಸಿರಿರುವ ತನಕ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿದ್ದರು ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಅಭಿಪ್ರಾಯಿಸಿದರು.
ಸೋಮವಾರ ನಿಧನರಾದ ಆಸ್ಕರ್ ಫರ್ನಾಂಡಿಸ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಅನೇಕ ನಾಯಕರನ್ನು ಸೃಷ್ಟಿಸಿದ ಒಳ್ಳೆಯ ವ್ಯಕ್ತಿತ್ವ ಆಸ್ಕರ್ ಅವರದ್ದು, 5 ಬಾರಿ ಲೋಕಸಭಾ ಸದಸ್ಯರಾಗಿ, 2 ಬಾರಿ ರಾಜ್ಯ ಸಭೆ ಸದಸ್ಯರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು.
ಸಣ್ಣ ಸಮುದಾಯದಿಂದ ಬಂದರೂ ಉನ್ನತ ಸ್ಥಾನಕ್ಕೆ ಏರಿ ಎಲ್ಲರನ್ನೂ ಒಂದೇ ರೀತಿ ಕಾಣುತ್ತಿದ್ದ ವ್ಯಕ್ತಿ. ಯಾವುದೇ ಜಾತಿ ಧರ್ಮದ ಭೇದ ತೋರದವರು ಎಂದರು.
ಅತಿಥಿ ಸತ್ಕಾರ ಮಾಡುವುದರಲ್ಲಿ ಮುಂದೆ ಇದ್ದ ಅವರು ಕಾರ್ಮಿಕರಿಗೆ ಇನ್ಸೂರೆನ್ಸ್ ವ್ಯವಸ್ಥೆ ಕಲ್ಪಿಸಿದವರು ಅಲ್ಲದೆ ಹೈವೇ ರಸ್ತೆ ಅಸ್ತಿತ್ವಕ್ಕೆ ಬರುವಲ್ಲಿ ಇವರ ಕೊಡುಗೆಯು ಇದೆ ಎಂದರು.
ಜಿಲ್ಲಾ ಕಾಂಗ್ರೆಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ ಮಹಮದ್ ಮಾತನಾಡಿ ಆಸ್ಕರ್ ನಾಯಕರಾಗಿದ್ದರೂ ಕಾರ್ಯಕರ್ತರಂತೆ ಕಾರ್ಯನಿರ್ವಯಿಸುತ್ತಿದ್ದರು. ಸರಳ ವ್ಯಕ್ತಿತ್ವ, ಕಾರ್ಯಕರ್ತರೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದರು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ,ವಕ್ತಾರ ರೂಬೆನ್ ಮೊಸಸ್, ಶಿವಾನಂದ್, ನಾಗೇಶ್, ಅಮರ್, ನೂರಿ, ಸುರೇಶ್, ಸುದೀಪ್ ಜೇಮ್ಸ್, ಸಂಜು, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss