ಆಸ್ಕರ್ ವೇದಿಕೆಯಲ್ಲೇ ಕಪಾಳಮೋಕ್ಷ: ಬಹಿರಂಗ ಕ್ಷಮೆಯಾಚಿಸಿದ ವಿಲ್​ ಸ್ಮಿತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಷ್ಠಿತ ಆಸ್ಕರ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಸ್ಯ ನಟ, ನಿರೂಪಕ ಕ್ರಿಸ್​ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ ನಟ ವಿಲ್​ ಸ್ಮಿತ್ ಇದೀಗ ಖುದ್ದು ಕ್ಷಮೆಯಾಚಿಸಿದ್ದಾರೆ.
ಪತ್ನಿ ಜಡಾ ಪಿಂಕೆಟ್ ಬಗ್ಗೆ ಕ್ರಿಸ್​ ರಾಕ್ ಗೇಲಿ ಮಾಡಿದ್ದಕ್ಕೆ ಕೋಪಗೊಂಡಿದ್ದ ವಿಲ್​ ಸ್ಮಿತ್ ವೇದಿಕೆ ಮೇಲೆಯೇ ಕಪಾಳಕ್ಕೆ ಬಾರಿಸಿದ್ದರು. ಆದರೆ ಲ್​ ಸ್ಮಿತ್ ವರ್ತನೆ ಬಗ್ಗೆ ಹಲವಾರು ಜನರು ಪರ ಮತ್ತು ವಿರೋಧವಾದ ಹೇಳಿಕೆಗಳು ನೀಡಿದ್ದರು.
ಇದೀಗ ಈ ಘಟನೆ ಬಗ್ಗೆ ಇನ್​​​​ಸ್ಟಾಗ್ರಾಂ ಪೋಸ್ಟ್​ ಮಾಡಿರುವ ವಿಲ್ ಸ್ಮಿತ್, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಹಿಂಸಾಚಾರವು ಎಲ್ಲ ರೀತಿಯಿಂದಲೂ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಅಲ್ಲದೇ, ಆಸ್ಕರ್ ಅಕಾಡೆಮಿ ಪ್ರಶಸ್ತಿ ಸಮಾರಂಭದ ವೇದಿಕೆ ಮೇಲೆ ನಾನು ತೋರಿದ ವರ್ತನೆ ಸ್ವೀಕಾರಾರ್ಹವಲ್ಲ ಹಾಗೂ ಅದನ್ನು ಕ್ಷಮಿಸಲಾಗದು. ನಾನು ತಪ್ಪು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!