Friday, June 2, 2023

Latest Posts

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ಬಿಗ್ ಆಫರ್ ಕೊಟ್ಟ OTT

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಎಲ್ಲೆಡೆ ಕರ್ಫ್ಯೂ ಹೇರಲಾಗುತ್ತಿದೆ. ಇದರಿಂದ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದ ಅನೇಕ ಚಿತ್ರ ತಂಡಗಳು ಹಿಂದೇಟು ಹಾಕಿದ್ದು, ಡೇಟ್ ಮುಂದೂಡಿಕೆ ಮಾಡುತ್ತಿದ್ದಾರೆ.
ಇದೇ ರೀತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರವನ್ನು ಫೆ.24ರಂದು ವಿಶ್ವದಾದ್ಯಂತ ಬಿಡುಗಡೆ ಮಾಡಲಾಗುವುದು ಎಂದು ಚಿತ್ರ ತಂಡ ಘೋಷಿಸಿತ್ತು. ಆದರೆ ಸದ್ಯ ಸದ್ಯದ ಪರಿಸ್ಥಿತಿ ನೋಡಿದರೆ, ಈ ಚಿತ್ರ ಬಿಡುಗಡೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ಓಟಿಟಿ ಈ ಚಿತ್ರದ ಹಕ್ಕನ್ನು ಪಡೆಯಲು ದೊಡ್ಡ ಮೊತ್ತದ ಆಫರ್ ನೀಡಿದೆ.
ಕೊರೋನಾ ಕಾರಣ ಮತ್ತೆ ಸರ್ಕಾರ ಶೇ.50ರಷ್ಟು ಸೀಟು ಭರ್ತಿಯೊಂದಿಗೆ ಚಿತ್ರ ಮಂದಿರ ನಡೆಸಲು ಅವಕಾಶ ನೀಡಿದೆ. ಈ ಸಂದರ್ಭದಲ್ಲಿ ದೊಡ್ಡ ಬಜೆಟ್ ನ ಚಿತ್ರಗಳನ್ನು ಬಿಡುಗಡೆ ಮಾಡಲು ಮುಂದು ಬರುತ್ತಿಲ್ಲ
ಹೀಗಾಗಿ ವಿಕ್ರಾಂತ್ ರೋಣ ಚಿತ್ರವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಿದರೆ ಬರೋಬ್ಬರಿ 100 ಕೋಟಿ ರೂಪಾಯಿ ನೀಡುವ ಆಫರ್ ನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ನಡೆದಿದೆ ಎನ್ನಲಾಗುತ್ತಿದೆ.
ಈ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ನೇರವಾಗಿ ಪ್ರಸಾರ ಮಾಡಲು ಆಫರ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಇದು ದಕ್ಷಿಣ ಭಾರತದಲ್ಲಿಯೇ ಚಿತ್ರವೊಂದಕ್ಕೆ ಮಾಡಿರುವ ಅತೀ ದೊಡ್ಡ ಆಫರ್. ಆದರೆ, ಇದುವರೆಗೂ ಚಿತ್ರ ತಂಡ ಮಾತ್ರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ನಿರ್ಮಾಪಕರು ಯಾವ ನಿರ್ಧಾರ ತೆದುಕೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!