ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಮತದಾನ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.