ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ HDK, ಚುನಾವಣೆ ನಿಲ್ಲಿಸಲು ಕಾಂಗ್ರೆಸ್ ಮುಖಂಡರು ನಮ್ಮ ಅಭ್ಯರ್ಥಿಯನ್ನು ಹೈಜಾಕ್ ಮಾಡಿ ಟಿಕೆಟ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಎಂಥಾ ಸ್ಥಿತಿ ಬಂದಿದೆ. ನಮ್ಮ ಅಭ್ಯರ್ಥಿಯನ್ನು ಹೈಜಾಕ್ ಮಾಡಿ ಚನ್ನಪಟ್ಟಣದಲ್ಲಿ ನಿಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಿಂದ ಕುತಂತ್ರ ನಡೆದಿದೆ. ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಯತ್ನ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.