ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಭಯ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಭಯ ಇಲ್ಲ. ಅವರು ಮುಡಾ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಾರೆ. ಅವರು ಚೆನ್ನಾಗಿದ್ದಾರೆ. ಅಧಿಕಾರ ದುರುಪಯೋಗ ಮಾಡಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳುವುದು. ತಾನು ಯಾವುದೇ ಅಕ್ರಮ ಎಸಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಿಎಂ ಆಗಿರುವಾಗ ಅಥವಾ ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಲ್ಲ ಎಂದು ಪರಮೇಶ್ವರ್ ಸಮರ್ಥಿಸಿಕೊಂಡರು.